Home Posts tagged #muneer katipalla

ವಂಚಕ ಕಂಪೆನಿಗಳು ಜನರನ್ನು ದೋಚಲು ಸರಕಾರಗಳ ನೀತಿಗಳೇ ಕಾರಣ – ಮುನೀರ್ ಕಾಟಿಪಳ್ಳ

ಜನಸಾಮಾನ್ಯರ ಮುಗ್ದತೆ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುವ ಹಣಕಾಸು, ಮಾರ್ಕೆಟಿಂಗ್, ಚೈನ್ ಲಿಂಕ್, ಸ್ಕೀಮ್ ಕಂಪೆನಿಗಳು ಕಾನೂನಿನ ಭಯವಿಲ್ಲದೆ ದಿನಕ್ಕೊಂದರಂತೆ ಮಂಗಳೂರು ನಗರದಲ್ಲಿ ತಲೆ ಎತ್ತುತ್ತಿವೆ. ಇಂತಹ ಕಂಪೆನಿಗಳ ವೈಭವೋಪೇತ ಕಾರ್ಯಕ್ರಮಗಳಲ್ಲಿ ರಾಜಕೀಯ ನೇತಾರರು, ಧಾರ್ಮಿಕ ಕ್ಷೇತ್ರದ ಗಣ್ಯರು ಮುಂದಾಲೋಚನೆ ಇಲ್ಲದೆ ಕಾಣಿಸಿಕೊಳ್ಳುವುದು ವಂಚಕ

 ಭರತ್ ಶೆಟ್ಟಿ ವೈಫಲ್ಯಕ್ಕೆ ಗುರುಪುರ ಹೋಬಳಿ ಬಲಿಯಾಗಿದೆ : ಮುನೀರ್ ಕಾಟಿಪಳ್ಳ ಆರೋಪ

ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು ಶಾಸಕ ಭರತ್ ಶೆಟ್ಟರಿಂದ ಸಾಧ್ಯವಾಗಲಿಲ್ಲ. ಗುರುಪರ ಬ್ಲಾಕ್ ವ್ಯಾಪ್ತಿಯಲ್ಲಿರುವ ಎರಡು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗಲಿ, ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು

ಕಾಟಿಪಳ್ಳ ಜಲೀಲ್ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ, ಪೊಲೀಸರ ಕೈಗಳನ್ನು ಸರಕಾರ ಕಟ್ಟಿಹಾಕಿದೆ : ಡಿವೈಎಫ್ಐ

ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ದುಂಡಾವರ್ತನೆಯ ಭಾಗವಾಗಿಯೆ ಕಾಟಿಪಳ್ಳ ದಲ್ಲಿ ಜಲೀಲ್ ಎಂಬ ಅಮಾಯಕ ಅಂಗಡಿ ವ್ಯಾಪಾರಿಯ ಕೊಲೆಯಾಗಿದೆ. ಈ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ ಎಂದು ಡಿವೈಎಫ್ಐ ರಾಜ್ಯ ಸಮಿತಿ ಆರೋಪಿಸಿದೆ. ಕಳೆದ ಒಂದು ವರ್ಷದ

ಕೊನೆಗೂ ‘ಸುರತ್ಕಲ್ ಟೋಲ್‌ಗೇಟ್’ ರದ್ದು

ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಕೊನೆಗೂ ಮಂಗಳೂರಿನ ಸುರತ್ಕಲ್  ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ. ಈ ಸಂಬಂಧ ಟ್ವಿಟರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ

ಸುರತ್ಕಲ್ ಟೋಲ್‌ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಪೊಲೀಸರು ಭೇಟಿ: ಹಲವು ಮುಖಂಡರಿಗೆ ನೋಟಿಸ್

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ

ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ- ಮುನೀರ್ ಕಾಟಿಪಳ್ಳ

ಭಾರತ ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ಜನರನ್ನು ತಂದು ನಿಲ್ಲಿಸಿದ್ದಾರೆ. ಇವತ್ತು ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಕಾಂ ಮುನೀರ್

ಸುರತ್ಕಲ್ ಟೋಲ್‍ಗೇಟ್ ತೆರವಿಗೆ ದಿನಾಂಕ ಘೋಷಣೆಗೆ ಆಗ್ರಹಿಸಿ ಸೆ.13ರಂದು ಧರಣಿ

ಟೋಲ್‍ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್

ಬೃಹತ್ ಕೈಗಾರಿಕೆಗಳ ಅಕ್ರಮಗಳನ್ನು ರಕ್ಷಿಸುತ್ತಿರುವ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜನರ ಆರೋಗ್ಯಕ್ಕೆ ಕಂಟಕ : ಮುನೀರ್ ಕಾಟಿಪಳ್ಳ ಆರೋಪ.

ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ