Home Posts tagged #murder news

ಬಂಟ್ವಾಳ: ಹಳ್ಳದಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ?

ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ. ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಕೆವಿ ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಮೊದಲನೇ ಆರೋಪಿಯಾಗಿ ಸಿಪಿಎಂ ನೇತಾರರಾದ ಎ. ಪೀತಾಂಬರನ್, ಎರಡನೇ ಆರೋಪಿಯಾಗಿ ಸಜಿ ಸಿ ಜಾರ್ಜ್ ಎಂಬ ಸಜಿ, ಮೂರನೇ ಆರೋಪಿಯಾಗಿ ಕೆ.ಎಂ. ಸುರೆಶ್, ನಾಲ್ಕನೇ ಆರೋಪಿಯಾಗಿ ಕೆ ಅನಿಲ್ ಕುಮಾರ್ ಎಂಬ ಅಬು, ಐದನೇ ಆರೋಪಿಯಾಗಿ ಜಿಜಿನ್, ಆರನೇ ಆರೋಪಿಯಾಗಿ ಶ್ರೀರಾಗ್ ಎಂಬ ಕೂಟು, ಏಳನೇ ಆರೋಪಿಯಾಗಿ

ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ

ಬೆಳ್ತಂಗಡಿ: ತಂದೆ-ಮಗನ ನಡುವೆ ವೈದ್ಯಕೀಯ ದಾಖಲೆ ವಿಷಯದಲ್ಲಿ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ತಂದೆ

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ. ರಾತ್ರಿಯ ವೇಳೆ ವೈದ್ಯಕೀಯ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ