ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು
ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.
ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ ” ರಾಷ್ಟ್ರೀಯ ಕಣ್ಮಣಿ” ರಾಷ್ಟ್ರ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 25 ರಂದು ಬೆಂಗಳೂರಿನಲ್ಲಿ ಸಂಸ್ಥೆಯ 29 ನೇ ವಾರ್ಷಿಕೋತ್ಸವದ ಸಮಾರಂಭದ ವೇಳೆ ಗಣ್ಯರ ಸಮ್ಮುಖದಲ್ಲಿ