ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ ಪಠ್ಯವಸ್ತು ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬೆಳೆಯಬೇಕು. ಅತ್ಯಂತ ಪುರಾತನ ಹಾಗೂ ಸಂಸ್ಕಾರಯುತ ಭಾಷೆ ಸಂಸ್ಕೃತ, ಅದು ಮಾತ್ರವಲ್ಲದೆ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಗಳು ವಿಶ್ವದ ಮೌಲ್ಯಮಾಪನದ ದಿಕ್ಕು ತೋರಿಸುವಂತಹವು. ಇಂತಹ ಶಿಷ್ಟ ಹಾಗೂ ಆಧ್ಯಾತ್ಮಿಕ ಶಿಕ್ಷಣ ನೀಡುವ ಸಂಸ್ಥೆಗೆ ಮಕ್ಕಳನ್ನು ಕಳುಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ಕರ್ನಾಟಕ
ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ
ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ
ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಏಳು ದಿನಗಳ ವಾರ್ಷಿಕ ಹಬ್ಬದಂದು ಪ್ರತಿ ವರ್ಷ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ಮಾಡಿದವರಿಗೆ ಕೊಡ ಮಾಡುವ ಜೋರ್ಜಿಯನ್ ಪುರಸ್ಕಾರವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಪ್ರಧಾನ ಮಾಡಲಾಯಿತು. ಚರ್ಚ್ ನ ಧರ್ಮಗುರು ರೆ.ಫಾ.ವರ್ಗೀಸ್ ತೋಮಸ್, ವಿವಿಧ ಚರ್ಚ್ ನ ಧರ್ಮ ಗುರುಗಳು, ಟ್ರಸ್ಟಿ ಜೋನ್ ಎಬ್ರಹಾಂ, ಚೀರಮಟ್ಟಂ, ಕಾರ್ಯದರ್ಶಿ
ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,
ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ನಲ್ಲಿದ್ದ ಸುಮಾರು 20ಕ್ಕೂ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸಾವರ, ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ನಿವಾಸಿ ವಿನಯ್(26ವ.)ಅವರು ಚಿಕಿತ್ಸೆಗೆ ಸ್ಪಂದಿಸದೆ ಮಾ.31ರ ಮಧ್ಯಾಹ್ನದ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸಣ್ಣಂಪಾಡಿ ನಿವಾಸಿ ಜೇಕಬ್ ಅವರ
ನೆಲ್ಯಾಡಿ :ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳು ಉದನೆ,ಇದರ ಕಿಂಡರ್ ಗಾರ್ಡನ್ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ರೆ.ಸಿಸ್ಟರ್ ಲಿಸ್ಸ್ ಮ್ಯಾಥ್ಯೂ , ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಎಲ್ಲಾ ಪುಟಾಣಿಗಳಿಗೆ ಶುಭ ಹಾರೈಸಿ ಪೋಷಕರಿಗೆ ಕಿವಿ ಮಾತನ್ನು ಹೇಳಿದರು.ಇನ್ನೊರ್ವ ಅತಿಥಿ ರೆ.ಸಿಸ್ಟರ್ ಎಲಿಝೆಟ್ ಮ್ಯಾಥ್ಯೂ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.ಸಂಚಾಲಕರಾದ ರೆ.ಫಾ ಹನಿ