Home Posts tagged #nelyadi (Page 6)

ನೆಲ್ಯಾಡಿ: ಬೈಕ್ ಮತ್ತು ಕಾರುಗಳ ಮಧ್ಯೆ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರ ತಾ.ಪಂ ಮಾಜಿ ಸದಸ್ಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮಧ್ಯೆ ನೆಲ್ಯಾಡಿ ಎಚ್‍ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿಯಿಂದ

ನೆಲ್ಯಾಡಿ: ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಪಡುಬೆಟ್ಟು ನೆಲ್ಯಾಡಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯು.,ಯಾನೆ ಸಲಾಂ ಬಿಲಾಲ್ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.ಕ್ರೀಡಾಂಗಣ ಉದ್ಘಾಟಿಸಿದರು.

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ

ನೆಲ್ಯಾಡಿ ಪ್ರೊಫೆಷನಲ್ ಕೊರಿಯರ್ ನ ಶೆಬಿನ್ ನೇಣಿಗೆ ಶರಣು

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಪೋಲಿಸ್

ನೆಲ್ಯಾಡಿ: ಶಾರ್ಟ್‌ಸರ್ಕ್ಯೂಟ್‌ನಿಂದ ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸೆಲ್ಫಿ ತೆಗೆಯಲು ನದಿಗೆ ಇಳಿದ ಯುವಕ ನೀರುಪಾಲು

ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್‍ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ

ಉದನೆಯಲ್ಲಿ ಗಣಪತಿ ಕಟ್ಟೆ ಧ್ವಂಸ ಪ್ರಕರಣ: ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉದನೆ ಎಂಬಲ್ಲಿರುವ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ ಕುಮಾರ್ (25) ಎಂದು ತಿಳಿದುಬಂದಿದೆ.ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ