ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು.
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು, ತಮ್ಮ ಬಹು ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಪದ್ಮುಂಜದಲ್ಲಿರುವ ಅವರ ನಿವಾಸದ ಬಳಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ