Home Posts tagged #padubidri

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ. ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ

ಬೆಂಗಳೂರು: ದ.ಕ, ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ , ಅಧಿಕಾರಿಗಳ ಸಭೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಪಡುಬಿದ್ರಿ: ಆ.24ರಂದು ಶಿವಾಯ ಫೌಂಡೇಶನ್ (ರಿ) ವತಿಯಿಂದ ವಿವಿಧ ಕಾರ್ಯಕ್ರಮಗಳು

ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಬಂಟರ ಸಂಘ ಡಾ. ವೈ ಎನ್ ಶೆಟ್ಟಿ

ಪಡುಬಿದ್ರಿ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ಸಮವಸ್ತ್ರ ವಿತರಣೆ

ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. “ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುವ ಯೋಗ ನಮಗೆ ದೊರಕಿದೆ. ಇದು ನಿಜಕ್ಕೂ ಸೌಭಾಗ್ಯ. ಶಾಲೆಯ ಋಣ ಬಹಳ ದೊಡ್ಡದು. ಈಗ ಈ ಮೂಲಕ ಋಣವನ್ನು ತೀರಿಸುವ ಅವಕಾಶ ದೊರೆತಿದೆ ” ಎಂದು

ಪಡುಬಿದ್ರಿ: ಮದ್ಯದ ಅಮಲಿನಲ್ಲಿ ಕಾರು ಚಾಲನೆ – ಸರಣಿ ಅಪಘಾತ-ಇಬ್ಬರು ಯುವಕರು ವಶಕ್ಕೆ

ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಹೆಜಮಾಡಿ

ಮಂಜಣ್ಣ ಸೇವಾ ಬಿಗ್ರೇಡ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ವಿಧ್ಯೇಂದ್ರ

ಟ್ಯಾಂಕರ್ ಬೈಕ್ ಗೆ ಡಿಕ್ಕಿ – ಬೈಕ್ ಸವಾರ ಮೃತ್ಯು

ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು ಹಳೆಯಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರು ವಂದನೆ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಫೇಮಸ್

ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಅಶಕ್ತ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ

ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್‌ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ