ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆ ಸಮರ್ಪಣೆ ಮತ್ತು ನಗನಾಣ್ಯ ಪರಿಕರಗಳ ಮೆರವಣಿಗೆ ನಡೆಯಿತು. ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ|
ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಶ್ರೀಕ್ಷೇತ್ರದಲ್ಲಿ ನಡೆಸಿದ