ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ