Home Posts tagged #Patla Foundation

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಮೋಹನ್ ಕೊಪ್ಪಲ ಆಯ್ಕೆ

ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ ಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಮೋಹನ್ ಕೊಪ್ಪಲ ರವರು ಈ ಹಿಂದೆ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ಇದರ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ

ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ

ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪಟ್ಲ ಫೌಂಡೇಶನ್ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ