ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. 2024ರ ಲೋಕಸಭೆ ಚುನಾವಣೆ ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದ ಹಬ್ಬವಾಗಿತ್ತು. 65 ಕೋಟಿಗೂ ಹೆಚ್ಚು ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ಇದಕ್ಕಾಗಿ
ಉತ್ತರ ಕರ್ನಾಟಕ ಮೂಲದ ಬೆಂಗಳೂರು ನಿವಾಸಿ ಇನ್ಫೋಸಿಸ್ ಸ್ಥಾಪಕರಲ್ಲಿ ಒಬ್ಬರಾದ ಸುಧಾ ಮೂರ್ತಿಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಬಗೆಗೆ ಪ್ರಧಾನಿ ಮೋದಿಯವರು ಎಕ್ಸ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿ, ರಾಷ್ಟ್ರಪತಿಯವರು ತಮ್ಮನ್ನು ನೇಮಿಸಿರುವುದು ಆನಂದ ತಂದಿದೆ ಎಂದು ಸಂತೋಷ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಮ ನಿರ್ದೇಶನ ಮಾಡಿದ್ದಾರೆ. ಇದರಿಂದ ನಾರೀ ಶಕ್ತಿಗೆ ಬಲ ಬಂದಂತಾಗಿದೆ ಎಂದೂ ಹೇಳಲಾಗಿದೆ.
ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,