Home Posts tagged #polali

ಪೊಳಲಿ ಕ್ಷೇತ್ರದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ : ಸಂಜೆಯ ವೇಳೆಗೆ ಮಳೆ ಕರುಣಿಸಿದ ಜಗನ್ಮಾತೆ

ಪೊಳಲಿ ಪರಿಸರದಲ್ಲಿ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಮಳೆಗಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿತ್ತು. ಸಂಜೆಯ ವೇಳೆಗೆ ದೇವಸ್ಥಾನದ ಆವರಣದಲ್ಲಿ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದ ಭಕ್ತ ಜನ ಪುಳಕಿತರಾಗಿದ್ದು ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಅನುಗ್ರಹದಿಂದ ಮಳೆಯಾಗಿದೆ

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’

ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ದೇವಸ್ಥಾನದ ಆವರಣದಲ್ಲಿ ತುಪ್ಪ ದೀಪ ಅಲಂಕಾರ ಸೇವೆ ನೆರವೇರಿತು… ಈ ವಿಶೇಷ ಸೇವೆಯು ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದ್ದು ಈ ಬಾರಿಯ ಸೇವಾಕಾರ್ಯಕ್ಕೆ ಅತಿಥಿಯಾಗಳು ಸೇರಿ ಚಾಲನೆ ನೀಡಿದರು. ಈ ವೇಳೆ ದೇವಸ್ಥಾನದ ಪ್ರಧಾನ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಗದ್ದೆಯಲ್ಲಿ ಭತ್ತ ನಾಟಿ ಪ್ರಾತ್ಯಕ್ಷಿಕೆ

ಬಂಟ್ವಾಳ: ದ.ಕ.ಜಿ.ಪಂ.ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ

ಶ್ರೀ ಕ್ಷೇತ್ರ ಪೊಳಲಿ ಅವರಣದಲ್ಲಿ ಸಾರಿಗೆ ಸುರಕ್ಷಾ-ಐಸಿಯು ಬಸ್‌ಗೆ ಸಚಿವ ಕೋಟಾ ಚಾಲನೆ

ಬಂಟ್ವಾಳ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿಸದ ’ ಸಾರಿಗೆ ಸುರಕ್ಷಾ-ಐಸಿಯು ಬಸ್’ ಗೆ ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತಿವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ದ.ಕ.ಜಿಲ್ಲೆಯಲ್ಲೆ ಮೊದಲಿಗೆ ಮಂಗಳೂರು ಮತ್ತು ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ