ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ
ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪುರಸ್ಕಾರವು 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಒಳಗೊಂಡಿದೆ. ಜನವರಿ ತಿಂಗಳಲ್ಲಿ
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ
ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,
ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು,
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ,
ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್‌ಆಪ್ ಗ್ರೂಪ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಲ ರಾಮಚಂದ್ರ ಮಾತನಾಡಿ ನಾನು
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು