Home Posts tagged #protest (Page 3)

ಕ್ರೈಸ್ತರ ಮೇಲಿನ ದಾಳಿಗೆ ಖಂಡನೆ ಎಸ್‌ಡಿಪಿಐಯಿಂದ ಕಾನೂನು ಹೋರಾಟ

ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ  ಪ್ರತಿಭಟನೆ 

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ

ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ

ಪ್ಯಾಸೆಂಜರ್ ರೈಲುಗಳನ್ನು ಪುನಃರಾರಂಭಿಸಬೇಕು : ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಮಂಜೇಶ್ವರ ರೈಲ್ವೆ ಸ್ಟೇಷನ್‌ಗೆ ಮಾರ್ಚ್ ಮತ್ತು ಧರಣಿ ನಡೆಯಿತು. ಎಐಟಿಯುಸಿ ಜಿಲ್ಲಾ ಕೋಶಾಧಿಕಾರಿ ಬಿ.ವಿ

ಗೋವು ಕಳ್ಳತನದ ವಿರುದ್ಧ ಹಿಂಜಾವೇ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ

ಬೈಂದೂರು : ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ

ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ, ಕಾರ್ಮಿಕರ ಸಂಹಿತೆಗಳನ್ನು ವಿರೋಧಿಸಿ ನಡೆದ ಭಾರತ್ ಬಂದ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ

ರೈತ ಹೋರಾಟಕ್ಕೆ ಬೆಂಬಲ : ಬಂಟ್ವಾಳದಲ್ಲಿ ಬೃಹತ್ ರ್‍ಯಾಲಿ , ರಸ್ತೆ ತಡೆ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ

ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ಬಿಡೆವು: ಸುರೇಶ್ ಕಲ್ಲಾಗರ್

ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ

ಮಂಗಳೂರಿನಲ್ಲಿ ವಿಶ್ವಹಿಂದು ಪರಿಷತ್, ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ