Home Posts tagged #pumpwell

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್

ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ

ಕಾರಿನ ಟಯರ್ ಬದಲಿಸಿ ಮಾನವೀಯತೆ ಮೆರೆದ ಸಂಚಾರಿ ಠಾಣಾ ಪೊಲೀಸರು

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ