Home Posts tagged #puttur news

ಅರುಣ್ ಕುಮಾರ್ ಪುತ್ತಿಲ-ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿ

ಪುತ್ತೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್

ವಿಧಾನ ಸಭಾ ಚುನಾವಣೆ-ಪುತ್ತೂರಿನಲ್ಲಿ ಒಟ್ಟು 13 ಮಂದಿಯಿಂದ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಜಾತ್ರೆ ಮಹೋತ್ಸವ : ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ

ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ಪುತ್ತೂರು ಮೆಡಿಕಲ್ ಕಾಲೇಜು ವಿಚಾರ : ಮಂಜೂರು ಜಾಗದಲ್ಲಿ `ಸೀಫುಡ್ ಕಾರ್ಖಾನೆ’ ಮುಂದಾದವರು ಯಾರು : ಎಂ.ಬಿ. ವಿಶ್ವನಾಥ ರೈ ಪ್ರಶ್ನೆ

ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ ಅಭಿಯಾನ ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆಪಾದಿಸಿದ್ದಾರೆ. ಒಂದು ವೇಳೆ ಬಿಜೆಪಿ ಮೆಡಿಕಲ್ ಕಾಲೇಜಿಗೆ ಮೊದಲು ಕನಸು ಕಂಡಿದ್ದು ನಿಜವೇ ಆಗಿದ್ದರೆ ಪುತ್ತೂರು ಶಾಸಕರು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ `ಸೀಫುಡ್

ನಾಳೆ ಪುತ್ತೂರಿಗರ ದಶಕದ ಬೇಡಿಕೆಯಾದ ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ.

ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ರೈಲ್ವೆ ಮತ್ತು ಎಪಿಎಂಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. 4

ಪುತ್ತೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ

ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‍ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ ಬಲವರ್ಧನೆಗೊಳ್ಳಲಿದೆ ಎಂದು ಅವರು ಹೇಳಿದರು.ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ,

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ತೀವೃವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಈ

ವಿಪರೀತ ಮಳೆಯಿಂದಾಗಿ ಮನೆಕುಸಿತ : ಬೀದಿಪಾಲಾಗುವ ಪರಿಸ್ಥಿತಿಯಲ್ಲಿ ಬಡ ಕುಟುಂಬ

ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ