Home Posts tagged #puttur

ಪುತ್ತೂರಿನ ಜೋಸ್ ಆಲುಕಾಸ್ ಗೆ ಐದನೇ ವರ್ಷದ ಸಂಭ್ರಮ

ಜೋಸ್ ಆಲುಕಾಸ್… ಚಿನ್ನಾಭರಣ ಸಂಸ್ಥೆಗಳ ಪೈಕಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ಅಂತರಾಷ್ಟ್ರೀಯ ಚಿನ್ನಾಭರಣ ಮಳಿಗೆ.. ಪುತ್ತೂರಿನ ಕೆಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸ್ತಾ ಇರೋ ಈ ಸಂಸ್ಥೆ ಈಗಾಗಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದು ಇದೀಗ ಸಂಸ್ಥೆಗೆ 5ವರ್ಷಗಳ ಸಂಭ್ರಮಾಚರಣೆ.‌ ಹಾಗಾಗಿ ಮಳಿಗೆಯಲ್ಲಿ ಡಿ.2ರಿಂದ ಸುವರ್ಣ

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವು

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ

ಪುತ್ತೂರು: ಕ್ಯೊಲದಲ್ಲಿ ಅಡಿಕೆ ತುಂಬಿದ ಗೋಣಿ ಕಳವು ಪ್ರಕರಣ: ನಾಲ್ವರ ಬಂಧನ

ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ, (20) ಹಾಗೂ ಜಯಚಂದ್ರ, (21) ಮತ್ತು ನಿಡ್ಪಳ್ಳಿ ಗ್ರಾಮದ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಬಂಧಿತರು ಕ್ಯೋಲ ಸಮೀಪದ ನವೀನ್ ರೈ ಎಂಬವರ ಹಳೆಯ ಮನೆಯ

🛑ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ, ಬಡವರ ಕನಸಿನ ಯೋಜನೆಗೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ

ಮಣಿಪುರದ ಹಿಂಸಾಚಾರ ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು

ವಿಟ್ಲ: ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಕಾರು: ರಿಕ್ಷಾ ಚಾಲಕನಿಗೆ ಗಾಯ

ಆಟೋ ರಿಕ್ಷಾವೊಂದಕ್ಕೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾದ ಘಟನೆ ವಿಟ್ಲದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಆಟೋಲ ಚಾಲಕ ಸೂರಿಕುಮೇರ್ ನಿವಾಸಿ ಹನೀಪ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಸೂರಿಕುಮೇರ್‌ನಿಂದ ಮಾಣಿ ಕಡೆಗೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಕಾರು ನಜ್ಜುಗುಜ್ಜಾಗಿದೆ.  

ಪುತ್ತೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ