Home Posts tagged #puttur (Page 13)

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ

ಪುತ್ತೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಪುತ್ತೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ಬಿಳಿ ಅಂಗಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಿಯಲ್ಲಿ ಈಗ ಬಿಳಿ ಎಲ್ಲಿದೆ ಎಂದು ಹುಡುಕಬೇಕಿದೆ. ಬರೀ ಕಪ್ಪು  ಚುಕ್ಕೆಗಳೇ ತುಂಬಿವೆ ಎಂದು ಸಂಸದ ಕ್ಯಾö. ಬ್ರಿಜೇಶ್ ಚೌಟ ಆಪಾದಿಸಿದರು. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಅವರು, ದಲಿತ ಭೂಮಿಯನ್ನು ನುಂಗಿದ ಸಿದ್ದರಾಮಯ್ಯ ಅವರು ಅದನ್ನು ತಮ್ಮ ಪತ್ನಿಯ

ಪುತ್ತೂರು ವಿಧಾನಸಭಾ ಕ್ಷೇತ್ರ ಬ್ಲಾಕ್ ಅಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ

ಸುಳ್ಯ: ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ಪಾವತಿಸದ ಸಂಸ್ಥೆ- ಬಸ್ ಚಾಲಕರ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್‌ಗಳು ಹೆಚ್ಚು ಸಂಚಾರ ನಡೆಸುತ್ತವೆ. ಇದೀಗ ಆ ಬಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ

ಪುತ್ತೂರು ನಗರಸಭೆಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ

ಪುತ್ತೂರು : ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0 ಶುಭಾರಂಭ ಹಾಗೂ ಲೋಗೋ ಅನಾವರಣ

ಪುತ್ತೂರಿನ ದರ್ಬೆಯಲ್ಲಿರುವ ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0ದ ಶುಭಾರಂಭ ಹಾಗೂ ಲೋಗೋ ಅನಾವರಣ ಮತ್ತು ೧೬೦ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಅಗಸ್ಟ್ 25ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಆಶೀರ್ವಾದ ಎಂಟರ್‌ಪ್ರೈಸಸ್ 2.0 ಶುಭಾರಂಭಗೊಳ್ಳಲಿದೆ. ಈ ಹಿಂದೆ ವಿನೂತನ ಹಾಗೂ ವಿಶೇಷ ಬಹುಮಾನಗಳನ್ನು ಗ್ರಾಹಕರಿಗೆ ನೀಡುತ್ತಿದ್ದ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ಮತ್ತೆ ಜನತೆಗಾಗಿ ವಿನೂತನ ಯೋಜನೆಗಳನ್ನು ಹೊತ್ತು ತಂದಿದೆ.ಪುತ್ತೂರಿನ ಬೈಪಾಸ್ ರಸ್ತೆಯ

ಪುತ್ತೂರು: ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣನ್ನು

ಸದನದಲ್ಲಿ ತುಳುವಿಗಾಗಿ ಹೋರಾಟ – ತುಳು ಅಕಾಡೆಮಿಯಿಂದ ಶಾಸಕರಿಗೆ ಸನ್ಮಾನ

ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕ್ಕಾಡ್ ರವರು ಶಾಸಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು