ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]
ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ ಕೇಂದ್ರದಲ್ಲಿನ ಸಿಬಂದಿಗಳಿಗೆ ರಕ್ಷಾ ಸಮಿತಿಗೆಮಹತ್ತರವಾದ ಜವಾಬ್ದಾರಿ ಇದೆ. ಕೇಂದ್ರಕ್ಕೆ ಬರುವ
ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ ಮತ್ತು ಮಾಡು ಸಂಪೂರ್ಣ ಜಖಂಗೊಂಡಿದೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ಶಾಸಕರಲ್ಲಿ
ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.
ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಕಾರ್ಯಕ್ರಮದ
ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ
ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ತಲವಾರು ಬೀಸಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಸಂಗಡಿಗರು ಬೈಕ್ ಬಿಟ್ಟು




























