ಬೆಳ್ತಂಗಡಿ. ಶಿಶಿಲ ದೇವಸ್ಥಾನದಲ್ಲಿ ದೇವರ ಮೀನುಗಳಿಗೆ ಕಪಿಲಾ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ
ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ಕಡಬ: ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣವಾದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ
ಕಡಬ ತಾಲೂಕು ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ
ರಾಜಕೀಯ ಶುದ್ಧೀಕರಣದ ಬಗ್ಗೆ ಸ್ವಂತ ತೀರ್ಮಾನ ತೆಗೆದುಕೊಳ್ಳಲು ನನ್ನಿಂದ ಸಾಧ್ಯ, ಆದರೆ, ಸಮಾನ ಮನಸ್ಕರಾಗಿ ನನ್ನೊಂದಿಗೆ ಕೈಜೋಡಿಸಲು ಯಾರಾದರೂ ಬರುವುದಾದರೆ ಎಲ್ಲರಿಗೂ ಸ್ವಾಗತ ಎಂದು ಸಂಸದ, ಮಾಜಿ ಸಿಎಂ ಡಿ. ವಿ. ಸದಾನಂದ ಗೌಡ ಹೇಳಿದರು. ಅವರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಂಪುಗಾರಿಕೆಗಳಿದ್ದವು. ದೆಹಲಿ ಬಣ ಹಾಗೂ ಕರ್ನಾಟಕ
ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್
ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.




























