Home Posts tagged #puttur (Page 23)

ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ.

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ಪುತ್ತೂರಿನ ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ವ್ಯಕ್ತಿಯ ಅಸಭ್ಯ ವರ್ತನೆ : ದೇವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಅವರು ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಕಂಬಳ

ಪುತ್ತೂರಿಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹ : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯಿಂದ ಜಾಥಾ

ಪುತ್ತೂರು: ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾವು ಪುತ್ತೂರು ದರ್ಬೆಯಿಂದ ಬೊಳುವಾರು ತನಕ ನಡೆಯಿತು. ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ಅವರು ದರ್ಬೆಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಉಪಾಧ್ಯಕ್ಷರಾದ ಝೇವಿಯರ್ ಡಿ’ಸೋಜಾ, ಎ ರೂಪೇಶ್ ರೈ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು

ಪುತ್ತೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜ.28ರಂದು ಪುತ್ತೂರಿನಲ್ಲಿ 30ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕೋಟ ಚೆನ್ನಯ ಜೋಡುಕರೆ ಕಂಬಳ ಜ.28ರಂದು ಬೆಳಗ್ಗೆ 10.35ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಉದ್ಘಾಟಿಸಲಿದ್ದು, ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಮಾರ್ಗದರ್ಶಕಿ ಶಕುಂತಳಾ ಟಿ. ಶೆಟ್ಟಿ ಮತ್ತು ಕಂಬಳ ಸಮಿತಿ ಅಧ್ಯಕ್ಷ ಎನ್.

ಪೊಲೀಸರ ಕೊಲೆ ಯತ್ನ-ಐವರು ಅಪಹರಣಕಾರರು ಸಿನಿಮೀಯ ಮಾದರಿಯಲ್ಲಿ ಸೆರೆ

ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಜೈಲು ಕಂಬಿ ಎಣಿಸಿತ್ತಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದ್ರು ಮಾಡ್ತಾರೆ ಅನ್ನೋದು ಆಗ್ಗಾಗ್ಗೆ ಸಾಬೀತಾಗುತ್ತಿದೆ. ಮಂಗಳೂರಿನಲ್ಲಿ ಇದೇ ರೀತಿ ಹಣದ ಆಸೆಗೆ

ಶಂಕುಸ್ಥಾಪನೆಗೊಂಡು ಸ್ತಬ್ಧಗೊಂಡಿದ್ದ ಹಾರಾಡಿ ಕ್ರಾಸ್ ರೈಲು ನಿಲ್ದಾಣ ರಸ್ತೆ ಮತ್ತೆ ಆರಂಭಗೊಂಡ ಕಾಮಗಾರಿ

ಪುತ್ತೂರು: ಕಳೆದ ನವೆಂಬರ್ 2ರಂದು ಶಂಕುಸ್ಥಾಪನೆಗೊಂಡ ಬಳಿಕ ಎರಡೂವರೆ ತಿಂಗಳು ಸ್ತಬ್ದಗೊಂಡಿದ್ದ ಹಾರಾಡಿ ಕ್ರಾಸ್- ರೈಲು ನಿಲ್ದಾಣ ರಸ್ತೆಯ ಅಭಿವೃದ್ಧಿ ಕಾಮಗಾರಿ ಇದೀಗ ಚಾಲನೆ ಪಡೆದುಕೊಳ್ಳುತ್ತಿದೆ. ಶುಕ್ರವಾರ ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ಅಧಿಕಾರಿಗಳ ತಂಡ ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸಿತು. ಕೆಲಸ ಆರಂಭಗೊಳ್ಳುತ್ತಿದೆ ಎಂದು ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು. ನ.2ರಂದು ಶಂಕುಸ್ಥಾಪನೆಯಾದ ಬೆನ್ನಲ್ಲೇ ಕೆಲಸ ಆರಂಭಗೊಳ್ಳಬೇಕಿತ್ತು.

ಜ.22ರಂದು ಪುತ್ತೂರಿನಲ್ಲಿ ಕಾಂಗ್ರೆಸ್‍ನಿಂದ ಜನಧ್ವನಿ ಕಾರ್ಯಕ್ರಮ

ಪುತ್ತೂರು: ಮಂಗಳೂರಿನಲ್ಲಿ ಜ.22ರಂದು ಸಾಯಂಕಾಲ 4 ಗಂಟೆಗೆ ನಡೆಯುವ ಜನಧ್ವನಿ ಕಾರ್ಯಕ್ರಮದಲ್ಲಿ ಒಟ್ಟು 50ಸಾವಿರ ಮಂದಿ ಸೇರುವ ನಿರೀಕ್ಷೆಯನ್ನು ಇಟ್ಟಿಕೊಳ್ಳಲಾಗಿದೆ. ಪ್ರತಿ ಬೂತ್ ಮಟ್ಟದಿಂದ 20 ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 5ಸಾವಿರ ಜನರು ಭಾಗವಹಿಸಲಿದ್ದಾರೆ. ಪಕ್ಷಕ್ಕೆ ಬದ್ದವಾಗಿ ಬರುವವರನ್ನು ಸ್ವಾಗತ ಮಾಡುತ್ತೇವೆ ಮತ್ತು ನಾವು ಪಕ್ಷದ ಚಿಹ್ನೆಯ ಕೆಳಗೆ ಕೆಲಸಮಾಡುತ್ತೇವೆ ಎಂದು ಪುತ್ತೂರು

ಪುತ್ತೂರಿನ ಪರ್ಲಡ್ಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು:ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆಯುವ ಮಕ್ಕಳ ಕಲಿಕಾ ಹಬ್ಬ ಪುತ್ತೂರಿನ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಲಿಕಾ ಹಬ್ಬದ ಅಂಗವಾಗಿ ಶಾಲಾ ವಠಾರವನ್ನು ತಳಿರು