Home Posts tagged #puttur (Page 26)

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ

ಮಣಿಪುರದ ಹಿಂಸಾಚಾರ ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು

ವಿಟ್ಲ: ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಕಾರು: ರಿಕ್ಷಾ ಚಾಲಕನಿಗೆ ಗಾಯ

ಆಟೋ ರಿಕ್ಷಾವೊಂದಕ್ಕೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾದ ಘಟನೆ ವಿಟ್ಲದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಆಟೋಲ ಚಾಲಕ ಸೂರಿಕುಮೇರ್ ನಿವಾಸಿ ಹನೀಪ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಸೂರಿಕುಮೇರ್‌ನಿಂದ ಮಾಣಿ ಕಡೆಗೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಕಾರು ನಜ್ಜುಗುಜ್ಜಾಗಿದೆ.  

ಪುತ್ತೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ

ಕರಾವಳಿಯಲ್ಲಿ ಭಾರೀ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚನೆ ಉಂಟಾಯಿತು.      ಕುಮಾರಧಾರ ನದಿಯಲ್ಲಿ ಭಾರೀ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ.  ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ

ಪುತ್ತೂರು : ಕಬಕಬೈಲಿನಲ್ಲಿ ನದಿಯಂತಾದ ಕೆಸರುಮಯ ರಸ್ತೆ

ಪುತ್ತೂರು : ಮಳೆಗಾಲ ಬಂತಂದ್ರೆ ಸಾಕು ರಸ್ತೆಗಳೆಲ್ಲ ಹದಗೆಡೋದನ್ನ ನೋಡ್ಬೋದು ಆದ್ರೆ ಈ ಊರಲ್ಲಿ ಮಳೆ ಬಂದ್ರೂ ಅದೇ ಕಥೆ ಮಳೆ ಬರದಿದ್ರೂ ಅದೇ ವ್ಯಥೆ… ಹೌದು..ಕಬಕ ಗ್ರಾಮದ ಕಬಕಬೈಲು ಎಂಬಲ್ಲಿ 10ವರ್ಷದಿಂದ ಇದೇ ಸಮಸ್ಯೆ…ಮಣ್ಣಿನ ರಸ್ತೆಯಿದ್ದು ಮಳೆಯಿದ್ದಾಗಂತು ಹೇಳೋದೆ ಬೇಡ ಇಡೀ ರಸ್ತೆ ಕೆಸರುಮಯ.. ವಾಹನ ಸವಾರರಂತೂ ಎದ್ದೂ ಬಿದ್ದು ಹೋಗೋ ಪರಿಸ್ಥಿತಿ. ಅದೆಷ್ಟೋ ಬಾರಿ ವಾಹನಗಳು ಕೆಸರಿಗೆ ಜಾರಿದ ಉದಾಹರಣೆಗಳು ಕೂಡಾ ಇದೆ. ಇನ್ನು ನಿತ್ಯ ಪಾದಚಾರಿಗಳ ಪರಿ ಕೇಳೋದೇ

ಬಿ.ಕೆ ಸೇಸಪ್ಪ ಬೆದ್ರಕಾಡು ವಿರುದ್ಧ ಜಾಲತಾಣದಲ್ಲಿ ಅಪಪ್ರಚಾರ : ಕಾನೂನು ಹೋರಾಟ ಸಮರದ ಎಚ್ಚರಿಕೆ ನೀಡಿದ ದಸಂಸ

ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ ಬೆಲೆ ಸಿಗದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಪುತ್ತೂರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ವಿಟ್ಲ ಮಾತನಾಡಿ, ನೆಲ್ಯಾಡಿ ಭಾಗದಲ್ಲಿ ಜಮೀನಿನ

ಪುತ್ತೂರು : ದಿ. ಜಯರಾಮ ಗೌಡ ಪೆರ್ಲಂಪಾಡಿ ಅವರಿಗೆ ನುಡಿನಮನ

ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಟ್ಯಾಕ್

ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ