Home Posts tagged #puttur (Page 26)

ಪುತ್ತೂರು : ಬಸ್ ಇಲ್ಲದ ಮೇಲೆ ಪಾಸ್ ಯಾಕೆ? ವಿದ್ಯಾರ್ಥಿಗಳ ಆಕ್ರೋಶ

ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಬಸ್ ಇಲ್ಲದ ಮೇಲೆ ನಮಗೆ ಪಾಸ್ ಯಾಕೆ ಎಂದು ಆಕ್ರೋಶ

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಗೃಹ ಸಚಿವರ ಮಾರಕ ಹೇಳಿಕೆ ಆರೋಪ

ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗೆ ಜ.2ರಂದು ಮನವಿ

ಅಡಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಬಾಲಿಶತನದ ಹೇಳಿಕೆಗೆ ಖಂಡನೆ, ಕಿಸಾನ್ ಘಟಕದ ವತಿಯಿಂದ ಪ್ರತಿಭಟನೆ

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ

ಪುತ್ತೂರಿನಲ್ಲಿ ರಸ್ತೆ ನಿರ್ಮಾಣಕ್ಕೆ ತಹಶೀಲ್ದಾರ್‍ಗೆ ಮನವಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ

ಕೋವಿಡ್ ನೆಪದಲ್ಲಿ ಭಾರತ ಜೋಡೋ ಯಾತ್ರೆ ತಡೆಯುವ ಷಡ್ಯಂತ್ರ : ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪ

ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರು ಅಪಘಾತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ ನೂಜಿ ಎಂಬಲ್ಲಿ ಡಿ.29 ರಂದು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಾ.ದೀಪಕ್ ರೈ ದಂಪತಿ ಸಮೇತ ಮಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಬೈಪಾಸ್ ರಸ್ತೆಯ ನೂಜಿ ಎಂಬಲ್ಲಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೆ

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು ಅನಾರೋಗ್ಯದಿಂದ ಡಿ.24 ರಂದು ನಿಧನರಾದರು.ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು..23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಡಿ.24ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ

ಡಿ.25ರಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಯುವ ಕ್ರೀಡಾ ಸಂಭ್ರಮ

ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ ಸುದ್ದಿಗೋಷ್ಠಿಯಲಿ ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮಮ ಪರಿವಾರ ಸಭೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ ಚರಂಡಿಯಲ್ಲಿ ಮೃತ ದೇಹ ಪತ್ತೆ https://v4news.com/mura-railway-station-death/ ಜನವರಿ ತಿಂಗಳಲ್ಲಿ