ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ ನಾಗರೀಕರ ಸಮುಚ್ಛಯದಲ್ಲಿ ನಡೆಯಿತು. ಪುಸ್ತಕ ಅನಾವರಣ ಮಾಡಿದ ಮುಂಬಯಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ತಾಳ್ತಜೆ
ಪುತ್ತೂರು : ಮಣಿಪುರ ರಾಜ್ಯದಲ್ಲಿ ಮೀಸಲಾತಿ ಗಲಭೆ ಸೃಷ್ಠಿಸಿ ಚರ್ಚ್ ಮತ್ತು ಕ್ರಿಶ್ಚಿಯನರ ಮೇಲೆ ಮೇಲೆ ನಡೆಸಲಾಗಿರುವ ದಾಳಿಯನ್ನು ಖಂಡಿಸಿ ಮತ್ತು ಮಣಿಪುರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಆಗ್ರಹಿಸಿ ಪುತ್ತೂರಿನ ಆಡಳಿತ ಸೌಧದ ಎದುರು ಸಿಐಟಿಯು ಬೆಂಬಲಿತ ತಾಲ್ಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಗೌರವಾಧ್ಯಕ್ಷರಾದ ಕಾರ್ಮಿಕ ಮುಂದಾಳು
ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದೆ. ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್‍ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕ ಆಶೋಕ್ ಕುಮಾರ್ ರೈ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಪುತ್ತೂರಿಗೆ ಉಪವಿಭಾಗಕ್ಕೆ ಎಸ್‍ಪಿ ಕಚೇರಿಯನ್ನು
ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ
ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಾಣಿಯ ವಿದ್ಯಾನಗರದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾದ ಸಂಸ್ಥೆ. ಇದೀಗ ಈ ಶಾಲೆಯಲ್ಲಿ ನಾಳೆ ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಟ್ರಸ್ಟ್ನ ಅಧ್ಯಕ್ಷ ಪ್ರಹಲ್ಲಾದ್ ಶೆಟ್ಟಿ ಜೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಕ್ತಿ ಎಜುಕೇಶನಲ್ ಟ್ರಸ್ಟ್ನ ಸ್ಥಾಪಕ ಡಾ ಕೆಸಿ ನಾಯ್ಕ್,
ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಖ್ಯಾತ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ
ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು.ಮಧ್ಯಾಹ್ನ 12 ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ
ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ
ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ




























