ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು
ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆಋಓಗ್ಯ ವಿಚಾರಿಸಿದರು.
ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ ಠಾಣಾ ಎಸ್‍ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗಡೆ ದೌರ್ಜನ್ಯ ಎಸಗಿದ ಪೊಲೀಸರನ್ನು ಅಮಾನತುಗೊಳಿಸಬೇಕು, ಜೊತೆಗೆ ಪೆÇಲೀಸರ ವಿರುದ್ಧ ಕೇಸ್ ದಾಖಲಿಸಬೇಕು ಎಂದು
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು
ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಮೇಲೆ ಪೋಲೀಸರು
ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನರಿಮೊಗರು
ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು
ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು



























