Home Posts tagged #puttur (Page 48)

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ

ಸಂಪೂರ್ಣ ಹದಗೆಟ್ಟ ಅಮ್ಮುಂಜೆ ರಸ್ತೆ ಅಭಿವೃದ್ಧಿಗೆ ಅಮ್ಮುಂಜೆ ಗ್ರಾಮಸ್ಥರ ಆಗ್ರಹ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ

ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಪುತ್ತೂರಿನ ಬೆಥನಿ ಸ್ಕೂಲ್ ನ ತನಿಶಾ ರೈ ರಾಜ್ಯಕ್ಕೆ ಪ್ರಥಮ

ಪುತ್ತೂರು: ಎಸ್ ಎಸ್ ಎಲ್. ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಬೆಥನಿ ಪ್ರೌಢಶಾಲಾ ವಿದ್ಯಾರ್ಥಿನಿ ತನಿಶಾ ರೈ 625 ರಲ್ಲಿ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಸಂಪ್ಯದ ಪ್ರಸನ್ನ ಕುಮಾರ್ ರೈ,ಜ್ಯೋತಿ ಪಿ ರೈ ದಂಪತಿ ಪುತ್ರಿಯಾಗಿದ್ದಾಳೆ.

2021-22ನೇ ಸಾಲಿನಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರಕ್ಕೆ ರೂ. 92.11 ಕೋಟಿ ಅನುದಾನ ಮಂಜೂರು-ಶಾಸಕ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ ಮಾಸದಲ್ಲಿ ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನಡೆಸಲಾಗುವುದು ಎಂದು ಪುತ್ತೂರು ಶಾಸಕ

ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ

ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಂಡ ಗುಂಡಿ ಮುಚ್ಚಿ ಹಾಕಿ ತಾಯಿ ಮಗಳ ಸಾಮಾಜಿಕ ಕಾಳಜಿ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.       ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು

ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 20 ವರ್ಷಗಳ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಯಾರದಲ್ಲಿ ತಂಡವೊಂದರಿಂದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದರು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. 2020ನೇ ನ.20ರಂದು ಮಧ್ಯಾಹ್ನ

ಪುತ್ತೂರಿನಲ್ಲಿ ಅಕ್ರಮ ಗೂಡಂಗಡಿಗಳ ತೆರವು: ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು