Home Posts tagged #puttur (Page 51)

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಪುತ್ತೂರು ಇದರ ವತಿಯಿಂದ ಮಲೇರಿಯಾ

ಪುತ್ತೂರಿನಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ

ರಾಜ್ಯದಾದ್ಯಂತ ಇಂದಿನಿಂದ ಎರಡು ದಿನಗಳ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಇಂದು ಮತ್ತೆ ನಾಳೆ ಸಂಪೂರ್ಣ ಬಂದ್ ಇರಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಹಾಲು, ಪೇವರ್ ಅಂಗಡಿ,ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಅಗಿದೆ. ಅನಗತ್ಯ ತೆರಳುವ ವಾಹನಗಳಿಗೆ ಪೋಲೀಸರಿಂದ ದಂಡ ವಿಧಿಸಿದ್ದಾರೆ. ಪುತ್ತೂರಿನಲ್ಲಿ ಪೋಲೀಸರ ಬಿಗಿ ಕಾವಲು ಏರ್ಪಡಿಸಿದ್ದಾರೆ. ವೀಕೆಂಡ್ ಕರ್ಫೂವನ್ನು ಪೊಲೀಸರು ಕಟ್ಟು ನಿಟ್ಟಾಗಿ

ಕೆಮ್ಮಾರ: ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು

ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕ್ಲೀನ್ ಮಾಡಿದ್ದು ಇದರಲ್ಲಿ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಇತ್ತು. ಮನೆಯವರು ಕೆಲಸ

ಪುತ್ತೂರಿನಲ್ಲಿ ಹಡಿಲು ಗದ್ದೆಯ ಬೇಸಾಯ: ಶಾಸಕ ಸಂಜೀವ ಮಠಂದೂರು ಚಾಲನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ

ಡಿಸಿಎಂ ಅಶ್ವತ್ಥ್ ನಾರಾಯಣ್‌ ರಿಂದ ಪುತ್ತೂರಿನ ಶಾಸಕರ ವಾರ್ ರೂಂಗೆ ಆಕ್ಸಿಜನ್ ಕಾನ್ಸನ್‌ ಟ್ರೇಟರ್

ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ ಮಠಂದೂರುರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾತುಕತೆ

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ

ಸೇಡಿಯಾಪುವಿನಲ್ಲಿ ರಸ್ತೆಗೆ ಅಡ್ಡವಾಗಿ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.  

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ