Home Posts tagged #puttur (Page 52)

ಮೈದಾನದ ಪ್ರವೇಶ ದಾರಿ ಬಂದ್ ಗ್ರಾಪಂನಿಂದ ಸಾಮರಸ್ಯ ಒಡೆಯುವ ಕೆಲಸ : ಎ.ಜತೀಂದ್ರ ಶೆಟ್ಟಿ ಆರೋಪ

ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ.

ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಣೆ

ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ

ಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ ಮನೆಯಲ್ಲಿದ್ದು, ಜೂ.೪ರಂದು ಬೆಳಿಗ್ಗೆ ಆಕೆ ವಾಸ್ತವ್ಯದ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ

ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆಗೆ ಕೇಂದ್ರದ ತಂಡ ಭೇಟಿ ನೀಡಲಿದೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ ರಸ್ತೆ ಹಾನಿ, ಕಡಲ್ಕೊರೆತ ಮತ್ತಿತರ ಹಾನಿಗಳ ಕುರಿತು ಪರಿಹಾರಕ್ಕಾಗಿ ರೂ. 125 ಕೋಟಿ ನಷ್ಟ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,

ವಿದೇಶಿ ಹಣ್ಣಿನ ಮೊರೆ ಹೋದ ಕರಾವಳಿಯ ಕೃಷಿಕರು

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ ಬೆಳೆಯ ಹುಡುಕಾಟದಲ್ಲಿ ಕರಾವಳಿಯ ಕೆಲ ಕೃಷಿಕರಿದ್ದು, ಇಂಥ ಕೃಷಿಕರು ಇದೀಗ ವಿದೇಶೀ ಹಣ್ಣಿನ ಮೊರೆ ಹೋಗಿದ್ದಾರೆ. ಈಗಾಗಲೇ ಈ ಹಣ್ಣಿನ ಬೆಳೆಯನ್ನೂ ಆರಂಭಿಸಿರುವ ಈ ಕೃಷಿಕರಿಗೆ ಭರ್ಜರಿ ಇಳುವರಿಯ ಜೊತೆಗೆ ಉತ್ತಮ ಆದಾಯವೂ ಬಂದಿದೆ.