ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ
ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ
ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” . ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು
ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ
ಪುತ್ತೂರಿನ ಪವಿತ್ರ ಶೆಟ್ಟಿ ಅವರು 2022 ರ ಜೂನ್ 26 ರಂದು ದುಬೈ ಸಿಲಿಕಾನ್ ಓಯಸಿಸ್‍ನ ರಾಡಿಸನ್ ರೆಡ್‍ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಯುಎಇಯಲ್ಲಿ ವಾಸಿಸುವ ಎಲ್ಲಾ ರಾಷ್ಟ್ರೀಯತೆಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯು ಮಧ್ಯಪ್ರಾಚ್ಯದಲ್ಲಿ ಅತಿದೊಡ್ಡ ಮತ್ತು ಅತ್ಯಂತ ಪಾರದರ್ಶಕ ಸ್ಪರ್ಧೆಗಳಲ್ಲಿ ಒಂದಾಗಿದೆ ಮತ್ತು ಅತ್ಯಂತ ಪ್ರತಿಷ್ಠಿತ ಮತ್ತು ಗಣ್ಯ
ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























