ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ