ಕಾನೂನು ತಪ್ಪಿ ಮಗು ದತ್ತು ಪಡೆದಿದ್ದರು ಎಂಬ ಆರೋಪಕ್ಕೆ ಒಳಗಾಗಿದ್ದ ರೀಲ್ಸ್ ನಟಿ ಸೋನು ಗೌಡ ಅವರಿಗೆ ಬೆಂಗಳೂರು ಗ್ರಾಮಾಂತರ ಸಿಜೆಎಂ ಅವರು ಜಾಮೀನು ಮಂಜೂರು ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಹೆಣ್ಣು ಮಗುವನ್ನು ದತ್ತು ಪಡೆಯುವಾಗ ಸೋನುಗೌಡ ಅವರು ಕಾನೂನು ನಿಯಮ ಪಾಲಿಸಿಲ್ಲ ಎಂದು ಅವರನ್ನು ಬಂಧಿಸಲಾಗಿತ್ತು. ವಾರದಲ್ಲಿ ವಿಚಾರಣೆ ಮುಗಿಯದೆ ಮೂರು ವಾರ ಎಳೆದಿತ್ತು.
ಬಿಗ್ ಬಾಸ್ ಮತ್ತು ರೀಲ್ಸ್ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಕಾನೂನು ಬಾಹಿರ ದತ್ತು ಸ್ವೀಕಾರದ ಸಂಬಂಧ ಬಂಧಿಸಲಾಗಿತ್ತು. ಈಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸರಳ ಹಿಂದೆ ಇಡಲಾಗಿದೆ. ಕಾನೂನು ಮತ್ತು ಅದು ಎತ್ತುವ ಪ್ರಶ್ನೆಗಳು ಇಲ್ಲಿ ಮಗುವಿನ ಸ್ಥಿತಿಗತಿಗೆ ಉತ್ತರವನ್ನು ನೀಡುವುದಿಲ್ಲ. ಒಟ್ಟಿನಲ್ಲಿ ಏನೂ ಅರಿಯದ ವಯಸ್ಸಿನಲ್ಲಿ ಇಂತಾ ಮಕ್ಕಳು ತ್ರಿಶಂಕು ಮನೋ ತುಮುಲಕ್ಕೆ ಒಳಗಾಗುತ್ತಾರೆ.




















