ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ