Home Posts tagged #saleem ahamad

ಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ