Home Posts tagged #sanjeevini

ಶಿರ್ತಾಡಿ : ಸಂಜೀವಿನಿ ಕಟ್ಟಡಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ ಗುಂಪುಗಳಿಗೆ ಸುಮಾರು ರೂ. 26ಲಕ್ಷ ಅನುದಾನವನ್ನು ಉದ್ಯೋಗ, ಸ್ವ ಉದ್ಯೋಗಕ್ಕಾಗಿ ನೀಡಲಾಗಿದೆ.