ಕಡಬ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ಹೈಯರ್ ಗ್ರೇಡ್ ಮತ್ತು ಲೋಯರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅಂಜನಾ ಜೇಮ್ಸ್ 491 ಅಂಕ
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ
ಶಿರೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13) ಮೃತ ವಿದ್ಯಾರ್ಥಿಗಳು. ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ. ಇಬ್ಬರಿಗೂ ಅಷ್ಟೇನು ಈಜಲು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,