ವಿಧಾನ ಸಭೆಗೆ ಆಯ್ಕೆಯಾದ ಕಾರಣ ರಾಜೀನಾಮೆ ನೀಡಿದ ಕೇಂದ್ರ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದಸಿಂಗ್ ಪಟೇಲ್, ರೇಣುಕಾ ಸಿಂಗ್ ಅವರು ಹೊಂದಿದ್ದ ಸಚಿವ ಖಾತೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೆಚ್ಚುವರಿಯಾಗಿ ನಾಲ್ವರು ಮಂತ್ರಿಗಳಿಗೆ ಹಂಚಿದ್ದಕ್ಕೆ ಅಂಕಿತ ಹಾಕಿದರು. ಮಂತ್ರಿ ಅರ್ಜುನ್ ಮುಂಡಾರಿಗೆ ಹೆಚ್ಚುವರಿಯಾಗಿ ಕೃಷಿ ಮತ್ತು ರೈತರ
ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪಾದಕ ಸಂಘವನ್ನು ಆರಂಭಿಸಲು ಸೂಚನೆ ನೀಡಿದ್ದಾರೆ. ದೇಶದ
ಕುಂದಾಪುರ: ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದವರು ನೂತನ ಸಚಿವರ ಪರಿಚಯಕ್ಕೂ ಅವಕಾಶ ನೀಡದೆ ಗದ್ದಲ ಎಬ್ಬಿಸಿದ್ದರಿಂದ ನಮ್ಮನ್ನು ನಾವು ಪರಿಚಯಿಸಿಕೊಳ್ಳಲು ಜನಾಶೀರ್ವಾದ ಯಾತ್ರೆ ಆರಂಭಿಸಿದ್ದೇವೆ. ನರೇಂದ್ರ ಮೋದೀಜಿಯವರ ಸರ್ಕಾರಕ್ಕೆ ಚಿಕ್ಕ ಕಪ್ಪು ಚುಕ್ಕೆಯೂ ಬಾರದಂತೆ ಅತ್ಯಂತ ಪಾರದರ್ಶಕವಾಗಿ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾಗಿ ಆಯ್ಕೆಗೊಂಡ ಬಳಿಕ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ