ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ
2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ
ದಕ್ಷಿಣ ಕನ್ನಡ ಜಿಲ್ಲೆಯ 4 ಶಾಲೆಗಳ 30 ಪರಿಣಿತ ವಿಷಯ ಶಿಕ್ಷಕರಿಂದ ಸಿದ್ಧಪಡಿಸಲಾದ ವಿದ್ಯಾರ್ಥಿ ಸ್ನೇಹಿ ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಗರದ ಪ್ರೆಸ್‍ಕ್ಲಬ್‍ನಲ್ಲಿ ಡಿಡಿಪಿಐ ಸುಧಾಕರ್ ಅವರು ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು,
2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ
ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ
ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು ಸೇರಿದಂತೆ ಜಿಲ್ಲೆಯೊಳಗೆ ಇಂದಿನಿಂದ ಷರತ್ತು ಬದ್ಧವಾಗಿ ಬಸ್ ಸಂಚಾರ ಆರಂಭಗೊಂಡಿದೆ. ಅಲ್ಲದೇ, ರೈಲು ಸಂಚಾರದ ವ್ಯವಸ್ಥೆಯೂ ಇದ್ದು, ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲೆಯೊಳಗಿನ ಪರೀಕ್ಷಾ ಕೇಂದ್ರಗಳಿಗೆ
ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ