Home Posts tagged #Stategovernment

ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಖಚಿತ : ಕೆ.ಅಭಯಚಂದ್ರ ಜೈನ್ ವಿಶ್ವಾಸ

ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ತನ್ನ

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.

ಮಂಗಳೂರು ಡೆಡ್ ಸಿಟಿಯಾಗಿದೆ-ಜಿಲ್ಲೆಯ ಅಭಿವೃದ್ಧಿಗೆ ಹೊಸ ಅಲೋಚನೆ ಇದೆ -ಡಿಸಿಎಂ ಡಿಕೆಶಿ

ಮಂಗಳೂರು ಸಂಜೆ ಏಳು ಗಂಟೆಯ ನಂತರ ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್‌ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ, ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಆಲೋಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಅವರು ಮಂಗಳೂರಿನ ಅಡ್ಯಾರ್‌ನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಮೈದಾನದ ಬಳಿ ಮಾತನಾಡಿದರು. ಇಲ್ಲಿನ

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್, ಉಡುಪಿಗೆ ನಾಲ್ಕನೇ ಸ್ಥಾನ

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ

ದ.ಕ. ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಡಿಪಿಐ ಮಲ್ಲೇಸ್ವಾಮಿ

ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ