Home Posts tagged #subhramnya

ಪುತ್ತೂರಿನ ಕೊಡನೀರು ಎಂಬಲ್ಲಿ ರಸ್ತೆ ಅಪಘಾತ : ದ್ವಿಚಕ್ರ ಸವಾರ ಮೃತ್ಯು

ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು .