Home Posts tagged sullia

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ

ಸುಳ್ಯ: ಮಾ.8 ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಸುಳ್ಯ: ಇಲ್ಲಿನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮ ಮಾ.8 ರಂದು ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೋಕೇಶ್ ಪೆಲಂಪಾಡಿ ತಿಳಿಸಿದ್ದಾರೆ.ಟೀಮ್ ಈಶ್ವರ್ ಮಲ್ಪೆ ಹಲವು ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿದ್ದು, ಈಗ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ

ಪೇರಾಲು: ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದಲ್ಲಿ ನಡೆದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ವಿಕ ವಿಧಿ ವಿಧಾನಗಳು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ

ಮಂಡೆಕೋಲು: ಇಂದಿನಿಂದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಸುಳ್ಯ::ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಂಡಿದ್ದು, ಫೆ. 22ರ ವರೆಗೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗದೇವರು ಮತ್ತು ಇರುವೆರು ಉಳ್ಳಾಕುಲು ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ವೇದಮೂರ್ತಿ ಬ್ರಹ್ಮಶ್ರೀ

ಕೆಡ್ಡಸ ದಿನಾಚರಣೆ–2026: ಸುಳ್ಯದಲ್ಲಿ ಸಂಭ್ರಮಾಚರಣೆ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ

ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026”

ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಫೆ.10 ರಂದು ಸುಳ್ಯದ ಲಯನ್ಸ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಭಾಗವಹಿಸಿ, ಮಾತನಾಡಿ ಮಕ್ಕಳೊಂದಿಗೆ ತಂದೆ ತಾಯಿಯ ಬಾಂಧವ್ಯ ಯಾವ ರೀತಿ ಇರಬೇಕೆಂದು ತಿಳಿ ಹೇಳಿ, ಶುಭ ಹಾರೈಸಿದರು. ಗೌರವಾನ್ವಿತ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯದ ವೆಂಕಟರಮಣ ಸಹಕಾರಿ ಸಂಘದ ಸಿಇಒ

ಮಂಡೆಕೋಲು: ಶ್ರೀ ಕ್ಷೇತ್ರ ಕಳೇರಿಯಲ್ಲಿ ನಡೆದ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವ: ಶ್ರೀ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವವು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು ಶ್ರೀ ಉಳ್ಳಾಕುಲು, ಧೂಮಾವತಿ, ರುದ್ರಚಾಮುಂಡಿ ಹಾಗೂ ಸಹಪರಿವಾರ ದೈವಗಳ ದೇವಸ್ಥಾನ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ದೈವಗಳ ನೇಮೋತ್ಸವವು ಊರಿನ ಭಕ್ತರ ಸಮ್ಮುಖದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕಳೇರಿ ಕಾರಣೀಕ

ಕಾಂಗ್ರೆಸ್ ಒಳಜಗಳ- ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಘೋಷಣೆ ಮಾಡಿದ ಅವರು, ಸುಮಾರು 28

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ

ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು.

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ