Home Posts tagged sullia

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಅಷ್ಠಬಂಧ ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮದೇವರಾದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ 13ರಿಂದ ಮೇ 4ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ಗಂಧ ಮತ್ತು ಅನ್ನ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಿದ್ದಾರೆ.

ಸುಳ್ಯ: ಮೇ 2ರಂದು ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆಯ ಉದ್ಘಾಟನೆ

ಸುಳ್ಯದಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಮೇ 2ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಒಡಬೈಯಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಆರಂಭಗೊಳ್ಳಲಿದೆ. ನೆಕ್ಸಾ ಕಾರುಗಳ ಪ್ರದರ್ಶನ ಮತ್ತು ಮಾರಾಟ, ಹಳೇ ಕಾರುಗಳ ವಿನಿಮಯ ಮತ್ತು ಮಾರಾಟ, ಇನ್ಶೂರೆನ್ ರಿನಿವಲ್ ಹಾಗೂ ಸುಲಭ ವಾಹನ ಸಾಲ ಸೌಲಭ್ಯಗಳು ಲಭ್ಯವಿದೆ  ಹೆಚ್ಚಿನ ಮಾಹಿತಿಗಾಗಿ ನೆಕ್ಸಾ ಮಾಂಡೋವಿ ಮೋಟರ್ಸ್ ಪ್ರೈವೇಟ್ ಲಿಮಿಟೆಡ್, ಸಮಿಟ್ ಅಪಾರ್ಟ್ಮೆಂಟ್ ಬಿಲ್ಡಿಂಗ್, ಏರ್ಪೋರ್ಟ್ ರೋಡ್, ಮೇರಿ ಹಿಲ್,

ನಾನೆಂಬ ಅಹಂಭಾವ ಇರುವಲ್ಲಿ ಶಾಂತಿ ನೆಲೆಸಲು ಅಸಾಧ್ಯ: ಒಡಿಯೂರು ಶ್ರೀ

ಸುಳ್ಯ: ನಾನು ಎಂಬ ಅಹಂಭಾವ ಹಾಗೂ ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಹೇಳಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಲಾದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಅವರು ಮಾತನಾಡಿದರು. ಸಂಸ್ಕಾರ, ಶಿಸ್ತು, ಸಂಯಮಗಳು ಜೊತೆಗಿದ್ದರೆ ಭವ್ಯ ಬದುಕಿನಲ್ಲಿ ದಿವ್ಯತೆಯ ಅನುಭವವನ್ನು

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,

ಸುಳ್ಯ:  ಭಕ್ತಿ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸುಳ್ಯ:  ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ

ಮಂಡೆಕೋಲು: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.  ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಬರುವ ಕಷ್ಟ

ಸುಳ್ಯ : ಪೇರಡ್ಕ ಜುಮ್ಮ ಮಸೀದಿಯಲ್ಲಿ ಈದ್ ಆಚರಣೆ

ಸುಳ್ಯ: ಪೇರಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ನಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಖತೀಬ್ ಶಾಫಿ ಧಾರಿಮಿ ರಂಜಾನ್ ಪಾವಿತ್ರತೆ ಬಗ್ಗೆ ತಿಳಿ ಹೇಳಿ ದಾನ,ಧರ್ಮ,ಕುಟುಂಬ ಸಂಬಂಧ, ಸಹೋದರತೆ ಮಹತ್ವ ಬಗ್ಗೆ ತಿಳಿಸಿ ಅದಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿ ಈದ್ ಹಬ್ಬದ ಶುಭಾಶಯ ತಿಳಿಸಿದರು. ಜಮಾತ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಉಪಾಧ್ಯಕ್ಷರು ಟಿ ಬಿ ಹನೀಫ್, ಕಾರ್ಯದರ್ಶಿ ಪಿ ಕೆ ಉಮ್ಮರ್ ಗೂನಡ್ಕ, ಖಜಾಂಜಿ ಟಿ ಎ ಮೊಹಮ್ಮದ್ ಕುಂಞಿ ತೆಕ್ಕಿಲ್,ಎಂ ಆರ್ ಡಿ

ಮಾನವೀಯತೆ ಮೆರೆದ ಬೆಳ್ಳಾರೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್

ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.