ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ
ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆ ಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು. ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಕೆವಿಜಿ ಸುಳ್ಯಹಬ್ಬ
ಸುಳ್ಯ.ಪೆರಾಜೆ ಗ್ರಾಮದ ಕನ್ನಡ ಪೆರಾಜೆ. ಕೋಡಿ ಪೆರಾಜೆ ಅಮೆಚೂರ್ ಪೆರಾಜೆ ಕೋಟೆಪೆರಾಜೆ. ಕುಂಬಳ ಚೇರಿ ಪೆರಾಜೆ. ಪುತ್ಯ ಪೆರಾಜೆ ಕುಂಡಾ ಡು ಪೆರಾಜೆ ಹಾಗೂ ಮುಳ್ಯದ ಅಟ್ಲೂರು ಬಡ್ಡಡ್ಕ ಶಾಲೆಗಳಿಗೆ ಪ್ರಣವ ಫೌಂಡೇಶನ್ ಬೆಂಗಳೂರು ಇವರು ಕೊಡ ಮಾಡುವ ಪುಸ್ತಕ ,2025 ಕಿಟ್ ವಿತರಿಸಲಾಯಿತು. ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 01-08-2025 ರಂದು 10 ಗಂಟೆಗೆ ಜ್ಯೋತಿ ಪ್ರೌಢಶಾಲೆಯಿಂದ ಚಾಲನೆ ಗೊಂಡು ಕಾರ್ಯಕ್ರಮವನ್ನು ಪೆರಾಜೆ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಗಣ್ಯರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದರವರು ಮಾತನಾಡುತ್ತಾ “ಪದವಿಯ ನಂತರ ವಿದ್ಯಾರ್ಥಿಗಳಿಗೆ ಹಲವಾರು ವೃತ್ತಿಪರ ಅವಕಾಶಗಳು ಲಭ್ಯವಿರುವುದರಿಂದ ಪದವಿ ಶಿಕ್ಷಣ
ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು ಚಿಂತಕರಾದ ಚಿದಾನಂದ ಮಾಸ್ಟರ್ ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿ, ಆಟಿ ಕೂಟ ಕಾರ್ಯಕ್ರಮ ಉತ್ತಮವಾಗಿ ಸಂಘಟಿಸಿದ್ದೀರಿ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿದ ಅವರು, 1996 ರಿಂದ ಕಾಲೇಜು
ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.
ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಶಾಲೆಯ ಪುಟಾಣಿ ವಿದ್ಯಾರ್ಥಿಗಳು ನೃತ್ಯ ಮಾಡಿ
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ.
ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಸುಳ್ಯ ತಾಲೂಕಿಗೆ