ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮತ್ತು ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಘದ ಉದ್ಘಾಟನೆ, ಪುಸ್ತಕ ಕೊಡುಗೆ ಮತ್ತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಬಾಬಾಸಾಹೇಬ್ ಡಾ. ಬಿ. ಆರ್
ಸುಳ್ಯ ತಾಲೂಕಿನ ಮಾಜಿ ಸೈನಿಕರ ಸಂಘ(Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಶುದ್ಧೀಕರಣ ಮತ್ತು ನಂಜು ಮುಕ್ತಗೊಳಿಸುವುದಕ್ಕಾಗಿ
ಬೆಳ್ಳಾರೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಎಂಬ ಕಾರ್ಯಕ್ರಮವು ಮೇ.20ರಂದು ಬೆಳಿಗ್ಗೆ 9.30ಕ್ಕೆ ಬೆಳ್ಳಾರೆಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂದೋರ್‌ನ ಶ್ರೀ ಸಿದ್ಧಿ ಅಗ್ರಿ ಕೋ ಪ್ರೈವೇಟ್ ಲಿಮಿಟೆಡ್‌ನ ಪೆರುವೋಡಿ ನಾರಾಯಣ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ.ಡಿ
ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಕಾಂಗ್ರೆಸ್ ಜಿಲ್ಲಾ
ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನ ನೂತನ
ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಾಗಲಕೋಟೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ವಾಗಲಿದೆ .
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ರಮಾದೇವಿ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು
ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್‌ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು ಸ್ಪರ್ಧಿಸಿದ್ದವು. ಇದೀಗ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರ ಭಾನುವಾರದಂದು ಸುಳ್ಯದ ಗೌಡ ಸಮುದಾಯ
ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ