Home Posts tagged #sulya (Page 3)

ಸುಳ್ಯ: ತಾಲೂಕು ಮಟ್ಟದ ಚೆನ್ನೆಮಣೆ ಆಟದ ಸ್ಪರ್ಧೆ

ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ‌ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಒಂದು ವರ್ಷದ ಹಿನ್ನಲೆ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ, ಬೂಡಿಯಾರು, ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಗುರುದತ್ ನಾಯಕ್, ಕೃಷ್ಣ, ರಾಕೇಶ್ ರೈ ಕೆಡೆಂಜಿ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಸುಳ್ಯ : ಹೊಳೆ ದಾಟುವಾಗ ಹೊಳೆಗೆ ಬಿದ್ದು ವ್ಯಕ್ತಿ ನಾಪತ್ತೆ

ಸುಳ್ಯದ ಅಲೆಟ್ಟಿ ಎಂಬಲ್ಲಿ ವ್ಯಕ್ತಿ ಯೋರ್ವರು ಹೊಳೆ ದಾಟುವಾಗ ಹೊಳೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸುಳ್ಯ ಪೊಲೀಸರೊಂದಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಎಸ್‍ಡಿಆರ್‍ಎಫ್ ತಂಡ, ಸ್ಥಳೀಯ ಈಜುಗಾರರ ತಂಡ ಸುಳ್ಯ ಪೊಲೀಸರು ರಾತ್ರಿವರೆಗೂ ಹುಡುಕಾಟ ನಡೆಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿರುವುದಿಲ್ಲ. ನಾಪತ್ತೆಯಾಗಿರುವ ವ್ಯಕ್ತಿ

ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.

ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ

ಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು

ಕಡಬ ಸಮುದಾಯ ಆಸ್ಪತ್ರೆ – ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸುವ ಭರವಸೆ : ಭಾಗೀರಥಿ ಮುರುಳ್ಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸಲು ಶೀರ್ಘ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್‍ರೇ ಯಂತ್ರ ನೀಡಲಾಗಿದ್ದರೂ

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಸುಳ್ಯ::ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ , ಸಾಂಸ್ಕೃತಿಕ ಕಾರ್ಯಕ್ರಮ ಸಹಿತ ದಿನ ಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು