ಬರಗಾಲದಿಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಆದರೆ ಕೆಂದ್ರ ಸರಕಾರವು ತಾರತಮ್ಯ ನೀತಿ ಅನುಸರಿಸುತ್ತ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಅವರು ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೊಟ್ಟಿ ನಡೆಸಿ ಮಾಹಿತಿ ನೀಡಿದರು.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು . ಈ ಮೂಲಕ ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.