Home Posts tagged #surathkal news

ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ : ಪೊಲೀಸರಿಂದ ಲಾಠಿ ಪ್ರಯೋಗ

ಸುರತ್ಕಲ್:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿ ಪ್ರಯೋಗ ಮಾಡಿರುವುದಾಗಿ ಎಂದು ತಿಳಿದು ಬಂದಿದೆ. ಪ್ರತಿಭಟನಾಕಾರರನ್ನು

ಟೋಲ್‍ಗೇಟ್ ತೆರವಿಗೆ ಇನ್ನೂ 20 ದಿನ ಅವಕಾಶ ಕೋರಿಕೆ : ಸಂಸದ ನಳಿನ್ ಕುಮಾರ್ ಕಟೀಲ್

ಸುರತ್ಕಲ್ ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 20 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‍ಗೇಟ್ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ.

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.