ಸುರತ್ಕಲ್ : ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ, ಹಿಂಧು ಧಾರ್ಮಿಕ ಸೇವಾ ಸಮಿತಿ
ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು ಬಳಿ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರಕ್ಕಿಳಿದ ನಾಲ್ವರು ನೀರಿನ ಸೆಳೆತಕ್ಕೆ ಸಮುದ್ರಪಾಲಾದರು.
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ
ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ
ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆ ಮೂಲಕ ಕಾರ್ಯಾಚರಣೆ ನಡೆಸಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ.
ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ
ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ ಜಿ ಎಸ್
ಸುರತ್ಕಲ್: ಇಡ್ಯಾ ಗೋವಿಂದ ದಾಸ್ ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಉಪಾಧ್ಯಕ್ಷರಾಗಿ, ಸುರತ್ಕಲ್ ಬಂಟರ ಸಂಘದ
ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ
ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ಉಜ್ವಲ್(26) ಸಾವನ್ನಪ್ಪಿದ ದುರ್ದೈವಿ.ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.