Home Posts tagged #surathkal (Page 11)

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ

ಸುರತ್ಕಲ್ ನಲ್ಲಿ ಅಲೆಮಾರಿ ಭಿಕ್ಷುಕ ಮಂದಿಯ ದಾಂಧಲೆ ಮುಕ್ತಗೊಳಿಸಲು ಮನವಿ

 ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,