Home Posts tagged #surathkal (Page 7)

ನಳಿನ್ ಕುಮಾರ್ ಮಹಾ ಜಾತಿವಾದಿ : ಸತ್ಯಜಿತ್ ಸುರತ್ಕಲ್ ಆರೋಪ

ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ

ಓಮಿನಿ ಕಾರಿನ ಮೇಲೆ ಸರಕು ಸಾಗಾಟದ ಲಾರಿ ಪಲ್ಟಿ ಸುರತ್ಕಲ್‍ನ ಕುಳಾಯಿಯಲ್ಲಿ ಘಟನೆ ಘಟನೆ

ಸುರತ್ಕಲ್‍ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್

ಮಂಗಳೂರು ಮುಳುಗಲು ನಗರಪಾಲಿಕೆಯೇ ಕಾರಣ” : ಮಾಜಿ ಶಾಸಕ ಮೊಯಿದೀನ್ ಬಾವಾ

“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಆಯ್ಕೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ

ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಶಾಸಕ ಯು.ಟಿ. ಖಾದರ್ ಖಂಡನೆ

ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ

ಬಿಂದಿಯಾ ಎಲ್ ಶೆಟ್ಟಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್‍ನಿಂದ ಗೊವಿಂದದಾಸ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಂದಿಯಾ ಎಲ್

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್‍ಗಿರಿ ಪ್ರಕರಣ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್