ಸುರತ್ಕಲ್ ಟೋಲ್ ಗೇಟ್ ತೆರವಾಗಿರುವ ಹಿನ್ನಲೆಯಲ್ಲಿ ಕಿನ್ನಿಗೋಳಿ ಹಳೆಯಂಗಡಿ ನಡುವೆ ಸಂಚರಿಸುವ ಎಲ್ಲಾ ಬಸ್ಗಳ ಟಿಕೆಟ್ ದರದಲ್ಲಿ ಡಿ.20 ರಿಂದ 2ರೂ ಕಡಿತ ಮಾಡಲಾಗುವುದು, ಕಿನ್ನಿಗೋಳಿಯಿಂದ ಮುಕ್ಕ ತನಕ ಹಿಂದಿನ ದರವೇ ಇರಲಿದೆ ಎಂದು ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ತಿಳಿಸಿದ್ದಾರೆ
ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ. ಟೋಲ್ ಗೇಟ್ ಪರಿಸರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು, ಭರವಸೆಗಳು ಬೇಡ, ಟೋಲ್ ನಿಲ್ಲಿಸಿ ಎಂದು ಒತ್ತಾಯಿಸುತ್ತಿದ್ದರಲ್ಲದೆ, ಅಕ್ರಮ ಟೋಲ್ ಗೇಟ್ ತೆರವು ಆಗುವವರೆಗೆ ಅನಿರ್ದಿಷ್ಟಾವಧಿ ಮುಂದುವರಿಯಲಿದೆ ಎಂದು